ಮಂಗಳೂರು : ಚಕ್ರಪಾಣಿ ನೃತ್ಯ ಕಲಾಕೇಂದ್ರ ಅತ್ತಾವರ ಮಂಗಳೂರು ಇವರ ವತಿಯಿಂದ ‘ಶಾರದಾ ಪೂಜಾ ಮಹೋತ್ಸವ ಮತ್ತು ವಾರ್ಷಿಕೋತ್ಸವ’ವನ್ನು ದಿನಾಂಕ 28 ಸೆಪ್ಟೆಂಬರ್ 2025ರಂದು ಬೆಳಿಗ್ಗೆ 8-30 ಗಂಟೆಗೆ ಅತ್ತಾವರ ಚಕ್ರಪಾಣಿ ಗೋಪಿನಾಥ ದೇವಸ್ಥಾನದ ಕಲಾ ಮಂಟಪದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 9-30 ಗಂಟೆಗೆ ‘ಶಾಸ್ತ್ರೀಯ ಸಂಗೀತ’ ಮತ್ತು ಸಂಜೆ 5-30 ಗಂಟೆಗೆ ‘ನೃತ್ಯಾರ್ಚನೆ’ ಕಾರ್ಯಕ್ರಮ ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರಸ್ತುತಗೊಳ್ಳಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಜನ್ ಕೆ.ಎಸ್. ಇವರು ವಹಿಸಲಿದ್ದಾರೆ.