ಬೆಂಗಳೂರು : ಮೈಸೂರಿನ ಸಮತೆಂತೋ ಪ್ರಸ್ತುತಿಯ ಡಾ. ಶ್ರೀಪಾದ ಭಟ್ ಇವರ ರಂಗಪಠ್ಯ ವಿನ್ಯಾಸ ನಿರ್ದೇಶನದಲ್ಲಿ ಇಂದಿರಾ ನಾಯರ್ ಅಭಿನಯಿಸುವ ‘ನೀರ್ಮಾದಳ ಹೂವಿನೊಂದಿಗೆ…’ ಏಕವ್ಯಕ್ತಿ ರಂಗ ಪ್ರಯೋಗವು ದಿನಾಂಕ 30 ಸೆಪ್ಟೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರು ಜೆ.ಪಿ. ನಗರದ ರಂಗಶಂಕರದಲ್ಲಿ ನಡೆಯಲಿದೆ. ಕಮಲಾ ದಾಸ್ ಇವರ ಜೀವನ ಮತ್ತು ಬರಹಗಳನ್ನು ಆಧರಿಸಿದ ಏಕವ್ಯಕ್ತಿ ಪ್ರದರ್ಶನ ಕನ್ನಡದಲ್ಲಿ ಮೊದಲ ಬಾರಿಗೆ ನಡೆಯಲಿದೆ. ಅನುಷ್ ಶೆಟ್ಟಿ ಮತ್ತು ಮುನ್ನಾ ಸಂಗೀತ ಹಾಗೂ ಮಧುಸೂದನ್ ನೀನಾಸಂ ಬೆಳಕಿನ ವಿನ್ಯಾಸ ಮಾಡಿರುತ್ತಾರೆ. ಟಿಕೆಟ್ ಮತ್ತು ಹೆಚ್ಚಿನ ಮಾಹಿತಿಗಾಗಿ 9590403087, 8088886388, 9611074424 ಮತ್ತು 7483136251 ಸಂಖ್ಯೆಯನ್ನು ಸಂಪರ್ಕಿಸಿರಿ.