ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಯಕ್ಷರಂಗ ಪುತ್ತೂರು ಇವರ ವತಿಯಿಂದ ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ (ರಿ.) ಮತ್ತು ಹಾಸ್ಯರತ್ನ ನಯನ ಕುಮಾರ್ ಅಭಿಮಾನಿ ಬಳಗ ಇವರ ಸಹಭಾಗಿತ್ವದೊಂದಿಗೆ ‘ಯಕ್ಷಗಾನ ತಾಳಮದ್ದಲೆ’ಯನ್ನು ದಿನಾಂಕ 02 ಅಕ್ಟೋಬರ್ 2025ರಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9-30 ಗಂಟೆಗೆ ಸೇರಾಜೆ ಸೀತಾರಾಮ ಭಟ್ಟ ವಿರಚಿತ ಹವ್ಯಕ ಪೌರಾಣಿಕ ಕಥಾನಕ ‘ಭೂಮಿಂಜಯನ ಬೊಬ್ಬೆ’, 12-30 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2-00 ಗಂಟೆಗೆ ಕವಿ ಗಣೇಶ್ ಕೊಲೆಕ್ಕಾಡಿ ವಿರಚಿತ ಪೌರಾಣಿಕ ಕಥಾನಕ ‘ಶನೀಶ್ವರ ಮಹಾತ್ಮೆ’ ಯಕ್ಷಗಾನ ತಾಳಮದ್ದಲೆ ಪ್ರಸ್ತುತಗೊಳ್ಳಲಿದೆ.