ದಾವಣಗೆರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ದಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಪ್ರತಿಭೆ (8ರಿಂದ 14 ವರ್ಷವಯೋಮಾನ), ಕಿಶೋರ ಪ್ರತಿಭೆ (14ರಿಂದ 18 ವರ್ಷವಯೋಮಾನ), ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಭಾಗವಹಿಸಬಹುದು. ಯುವ ಪ್ರತಿಭೆ (18 ರಿಂದ 30 ವರ್ಷ ವಯೋಮಾನ) : ನನ್ನ ನೆಚ್ಚಿನ ಸಾಹಿತಿ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ನಾಟಕ- 10ರಿಂದ 18 ತಂಡದ ಸದಸ್ಯರು ಭಾಗವಹಿಸಬಹುದು.
ಸ್ಪರ್ಧಿಗಳು ಸ್ವ ವಿವರದ ಅರ್ಜಿ ಸಲ್ಲಿಸಲು ದಿನಾಂಕ 10 ಅಕ್ಟೋಬರ್ 2025 ಕೊನೆಯ ದಿನವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರವನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ ದಾವಣಗೆರೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-234849ನ್ನು ಸಂಪರ್ಕಿಸಬಹುದು.