ಮಂಗಳೂರು : ಕೆ.ಎಸ್. ಉಪಾಧ್ಯಾಯ ಮೆಮೋರಿಯಲ್ ಟ್ರಸ್ಟ್ (ರಿ.) ಮತ್ತು ಸಂತ ಆಗ್ನೇಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 03 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಮಂಗಳೂರು ಸಂತ ಆಗ್ನೇಸ್ ಕಾಲೇಜು ಕ್ಯಾಂಪಸ್ ‘ಅವಿಲಾ ಹಾಲ್’ನಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಲೀಲಾ ಉಪಾಧ್ಯಾಯ ಸಂಪಾದಿಸಿರುವ ಶ್ರೀ ಕೆ.ಎಸ್. ಉಪಾಧ್ಯಾಯ ಅವರ ಎರಡು ಕೃತಿಗಳು ಲೋಕಾರ್ಪಣೆಗೊಳ್ಳಲಿವೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಸಂತ ಆಗ್ನೇಸ್ ಕಾಲೇಜಿನ ಪ್ರಾಂಶು ಪಾಲರಾದ ಸಿ.ಡಾ.ಎಂ. ವೆನಿಸ್ಸಾ ಎ.ಸಿ. ಇವರು ವಹಿಸಲಿದ್ದು, ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ವಾಂಸರು ಮತ್ತು ಖ್ಯಾತ ಯಕ್ಷಗಾನ ಅರ್ಥಧಾರಿ ಡಾ. ಎಂ. ಪ್ರಭಾಕರ ಜೋಶಿ ಮತ್ತು ಡಾ. ರಾಮಮೋಹನ್ ರಾವ್ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಹಿರಿಯ ವಕೀಲರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಕಾಧ್ಯಕ್ಷರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್, ಹಿರಿಯ ಯಕ್ಷಗಾನ ಕಲಾವಿದರು ಮತ್ತು ವಿದ್ವಾಂಸರಾದ ಪ್ರೊ. ಎಂ.ಎಲ್. ಸಾಮಗ, ಮಂಗಳೂರಿನ ಹಿರಿಯ ಶಸ್ತ್ರಚಿಕಿತ್ಸಕರಾದ ಡಾ. ಸಿ.ಆರ್. ಬಲ್ಲಾಳ್, ಕಲ್ಕೂರ ಪ್ರತಿಷ್ಠಾನ ಸ್ಥಾಪಕರು ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಲೇಖಕರು ಮತ್ತು ನಿವೃತ್ತ ಪ್ರಾಂಶುಪಾಲರು ಚಂದ್ರಕಲಾ ನಂದಾವರ, ಕಾದಂಬರಿಕಾರ ವಿಮರ್ಶಕರಾದ ಡಾ. ಬಿ. ಜನಾರ್ದನ ಭಟ್, ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಮೂಹ ವಿದ್ಯಾಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಸುಧಾಕರ ರಾವ್ ಪೇಜಾವರ ಇವರುಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.