ಮಂಗಳೂರು : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠ ಇದರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ 4-30 ಗಂಟೆಗೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಮಲ್ಲೇಪುರಂ ಜಿ. ವೆಂಕಟೇಶ್ ಇವರಿಂದ ಪ್ರಸ್ತಾವನೆ ಮತ್ತು ಉಪನ್ಯಾಸಕ ಜಗದೀಶ ಶರ್ಮ ಸಂಪ ಮತ್ತು ಪ್ರಾಧ್ಯಾಪಕರಾದ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಇವರಿಂದ ಉಪನ್ಯಾಸ ನಡೆಯಲಿದೆ. ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ ಶಾಸ್ತ್ರಿಯರಿಂದ ಬನ್ನಂಜೆಯವರ ಹಾಡುಗಬ್ಬ ಹಾಗೂ ಸುಚೇಂದ್ರ ಪ್ರಸಾದ್ ಇವರ ನಿರ್ದೇಶನ ಮತ್ತು ಅಭಿನಯದಲ್ಲಿ ‘ನನ್ನ ಪಿತಾಮಹ’ ನಾಟಕ ಪ್ರದರ್ಶನಗೊಳ್ಳಲಿದೆ.