ಬೆಂಗಳೂರು : ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ (ರಿ) ಇದರ ವತಿಯಿಂದ ನೀಡುವ ‘ರಂಗಭೂಮಿ ರತ್ನ ರಾಜ್ಯೋತ್ಸವ ಪ್ರಶಸ್ತಿ’ಗೆ ಬಾಗಲಕೋಟೆಯ ಡಾ. ಮಹಂತೇಶ್ ಬಸಪ್ಪ ಇವರು ಆಯ್ಕೆಯಾಗಿದ್ದಾರೆ. ಇವರು ರಂಗಭೂಮಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಿದೆ. ದಿನಾಂಕ 30 ನವೆಂಬರ್ 2025ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.