ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ‘ಲೋಕಗೆಂದಿನ ಗಾಂಧಿಯೆರ್’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 04 ಅಕ್ಟೋಬರ್ 2025ರಂದು ಬೆಳಿಗ್ಗೆ 11-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ಣಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕುಡ್ಲದ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಡಾ. ಎನ್. ಇಸ್ಮಾಯಿಲ್ ಇವರು ಪುಸ್ತಕ ಪರಿಚಯ ಮಾಡಲಿದ್ದು, ಮಾಜಿ ಸಚಿವ ಅಭಯಚಂದ್ರ ಜೈನ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.