ಪುತ್ತೂರು : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು ಇದರ ವತಿಯಿಂದ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 05 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಉದ್ಘಾಟನೆಯನ್ನು ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಇವರು ಮಾಡಲಿದ್ದು, ಜಿ.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಬಲರಾಮ ಆಚಾರ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಂಜಿಗುಡ್ಡೆ ಈಶ್ವರ್ ಭಟ್ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.