ಪುತ್ತೂರು : ಪುತ್ತೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಉಪವಿಭಾಗ, ಡಾ. ಕೋಟ ಶಿವರಾಮ ಕಾರಂತರ ಬಾಲವನ ಸಮಿತಿ ಪುತ್ತೂರು ಇದರ ವತಿಯಿಂದ, ನಡೆದಾಡುವ ವಿಶ್ವಕೋಶ’ ಎಂದೇ ಪ್ರಖ್ಯಾತರಾದ ಕಡಲತಡಿಯ ಭಾರ್ಗವ’ ಡಾ. ಕೋಟ ಶಿವರಾಮ ಕಾರಂತರ 124ನೇ ಜನ್ಮದಿನಾಚರಣೆ ಮತ್ತು 2024 ಹಾಗೂ 2025ನೇ ಸಾಲಿನ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ 10 ಅಕ್ಟೋಬರ್ 2025 ರಂದು ಪೂರ್ವಾಹ್ನ 9:30ರಿಂದ ರಾತ್ರಿ 8:30ರ ತನಕ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪುತ್ತೂರು ಬಾಲವನ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಡಾ. ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ವಿಶ್ರಾಂತ ಉಪಕುಲಪತಿ, ಹಿರಿಯ ಸಾಹಿತಿಯೂ ಆಗಿರುವ ಡಾ. ಬಿ.ಎ.ವಿವೇಕ ರೈರವರಿಗೆ ಹಾಗೂ 2025ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಹಿರಿಯ ಶಿಕ್ಷಣ ತಜ್ಞ ಹಾಗೂ ಶಿಕ್ಷಣ ಸಾಹಿತಿಯೂ ಆಗಿರುವ ಡಾ. ಎನ್.ಸುಕುಮಾರ್ ಗೌಡರವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಎಲ್ಲಾ ವರ್ಗೀಸ್ ಹೇಳಿದರು.