ಉಡುಪಿ : ಹಿರಿಯ ಸಾಹಿತಿ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಮೊದಲ ‘ಡಾ. ಶಿವರಾಮ ಕಾರಂತ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ದಿನಾಂಕ 11 ಅಕ್ಟೋಬರ್ 2025ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ಕಾರಂತ ಜನ್ಮದಿನೋತ್ಸವ-ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ತಿಳಿಸಿದ್ದಾರೆ
ಕನ್ನಡ ಸಾಹಿತ್ಯ ಮತ್ತು ವಿಮರ್ಶೆ, ಜಾನಪದ ಸಂಶೋಧನೆ, ಕಾರಂತರ ಬದುಕಿನ ದಾಖಲಾತಿ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರೊ. ರೈ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಮಂಗಳೂರು ವಿ.ವಿ.ಯಲ್ಲಿ ಕಾರಂತ ಪೀಠ ಸ್ಥಾಪಿಸಿ ಅದರ ಮೂಲಕ ಕಾರಂತರ ಬದುಕು-ಬರಹಗಳ ಹಲವು ಆಯಾಮಗಳನ್ನು ಇವರು ದಾಖಲಿಸಿದ್ದಾರೆ.