ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷ ರಂಗಾಯಣ ಕಾರ್ಕಳ ಮತ್ತು ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಜನ್ಮ ದಿನಾಚರಣೆ ಪ್ರಯುಕ್ತ ‘ಕಾರಂತ ಉಪನ್ಯಾಸ ಮತ್ತು ರಂಗಪ್ರದರ್ಶನ’ವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಯಕ್ಷ ರಂಗಾಯಣ ಕಾರ್ಕಳ ಇದರ ನಿರ್ದೇಶಕರಾದ ಬಿ.ಆರ್. ವೆಂಕಟರಮಣ ಐತಾಳ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ವಿಮರ್ಶಕರಾದ ಎಸ್.ಆರ್. ವಿಜಯಶಂಕರ್ ಇವರು ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ನಿರ್ದಿಗಂತ ತಂಡದವರಿಂದ ಡಾ. ಶಿವರಾಮ ಕಾರಂತ ಕಾದಂಬರಿ ಆಧಾರಿತ ಅಮಿತ್ ರೆಡ್ಡಿ ಇವರ ನಿರ್ದೇಶನದಲ್ಲಿ ‘ಮೈಮನಗಳ ಸುಳಿಯಲ್ಲಿ’ ನಾಟಕ ಪ್ರಯೋಗ ಪ್ರಸ್ತುತಗೊಳ್ಳಲಿದೆ.