ಉಡುಪಿ : ಉಡುಪಿ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ದಿನಾಂಕ 11 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ‘ಸರ್ಪಂಗಳ ಯಕ್ಷೋತ್ಸವ -2025’ ಕಾರ್ಯಕ್ರಮವು ನಡೆಯಲಿದೆ. ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ, ಪ್ರಶಸ್ತಿ ಪುರಸ್ಕಾರ ಪ್ರದಾನ ಮತ್ತು ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
‘ಸರ್ಪಂಗಳ ಯಕ್ಷೋತ್ಸವ’ದ ಮಾರ್ಗದರ್ಶಕರಾದ ಶ್ರೀಮತಿ ನಳಿನಿ ಸುಬ್ರಹ್ಮಣ್ಯ ಭಟ್ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಇವರು ವಹಿಸಲಿದ್ದಾರೆ. ಪ್ರಸಿದ್ಧ ಯಕ್ಷಗಾನ ಕಲಾವಿದರಾದ ವೇಣೂರು ಸದಾಶಿವ ಕುಲಾಲ್ ಇವರಿಗೆ ಕಲಾಪೋಷಕ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸ್ಮಾರಕ ಪ್ರಶಸ್ತಿ ಮತ್ತು ಪ್ರಸಿದ್ಧ ಚಕ್ರತಾಳ ವಾದಕರಾದ ಪಿ. ಸುರೇಶ್ ಕಾಮತ್ ಇವರಿಗೆ ಶ್ರೀ ಸರ್ಪಂಗಳ ಕಲಾಸೇವೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಪ್ರಸಿದ್ಧ ಕಲಾವಿದರಿಂದ ‘ಉಷಾ ಪರಿಣಯ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.