ಮಂಗಳೂರು : ಕಲ್ಕೂರ ಪ್ರತಿಷ್ಠಾನ ಇದರ ವತಿಯಿಂದ ‘ಕಾರಂತ ಹುಟ್ಟುಹಬ್ಬ’ವನ್ನು ದಿನಾಂಕ 14 ಅಕ್ಟೋಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿಶ್ರಾಂತ ಉಪ ಕುಲಪತಿಗಳಾದ ಬಿ.ಎ. ವಿವೇಕ ರೈ ಇವರಿಂದ ಪುಷ್ಪ ನಮನ, ಉಪಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಇವರಿಂದ ಪ್ರಶಸ್ತಿ ಪ್ರದಾನ ಮತ್ತು ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಇವರಿಂದ ಕಾರಂತ ಸಂಸ್ಮರಣೆ ನಡೆಯಲಿದ್ದು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ಣಾಟಕ ವಿಧಾನ ಪರಿಷತ್ತು ಸಭಾಪತಿಗಳಾದ ಬಸವರಾಜ ಹೊರಟ್ಟಿ ಇವರಿಗೆ ‘ಕಾರಂತ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ತು ಸದಸ್ಯರಾದ ಐವನ್ ಡಿ.ಸೋಜ ಇವರಿಂದ ಪ್ರಬಂಧ ಸ್ಪರ್ಧೆ ಹಾಗೂ ಸಂತ ಅಲೋಶಿಯಸ್ ಪ್ರೌಢಶಾಲೆಯ ಪ್ರಾಂಶುಪಾಲರಾದ ಫಾ. ಜಾನ್ ಸನ್ ಪಿಂಟೋ ಎಸ್.ಜೆ. ಇವರಿಂದ ಚಿತ್ರಸ್ಪರ್ಧೆಯ ಬಹುಮಾನ ವಿತರಣೆ ನಡೆಯಲಿದೆ.