ಕೊಪ್ಪಳ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕೊಪ್ಪಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ.) ಬೆಂಗಳೂರು ಕೊಪ್ಪಳ ಜಿಲ್ಲೆ ಇವರ ಸಹಯೋಗದಲ್ಲಿ ‘ಜಿಲ್ಲಾ ಮಟ್ಟದ ಯುವಜನೋತ್ಸವ 2025-26’ ದಿನಾಂಕ 17 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಕೊಪ್ಪಳ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಭಾಷಣ, ಕವಿತೆ, ವಿಜ್ಞಾನ ಮೇಳ ಸ್ಪರ್ಧೆಗಳು ನಡೆಯಲಿದ್ದು, ಹೆಚ್ಚಿನ ಮಾಹಿತಿ ಹಾಗೂ ಸ್ಪರ್ಧೆಯ ನಿಯಮಗಳಿಗೆ 08539 230121, 76763 43554 ಮತ್ತು 81973 98600 ಸಂಖ್ಯೆಯನ್ನು ಸಂಪರ್ಕಿಸಿರಿ.