ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ : 94483 46276. ಇಲ್ಲಿಗೆ ದಿನಾಂಕ 30 ಅಕ್ಟೋಬರ್ 2025ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.