ಪುತ್ತೂರು : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು (ರಿ.), ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ 10ನೆಯ ಗಮಕ ಸಮ್ಮೇಳನವನ್ನು ದಿನಾಂಕ 17 ಮತ್ತು 18 ಅಕ್ಟೋಬರ್ 2025ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆ ಶ್ರೀ ಮುಳಿಯ ತಿಮ್ಮಪ್ಪಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಸ್ಥಾನ ಮೆಲ್ಕಾರ್ ಬಂಟ್ವಾಳ, ವಸುಧಾ ಪ್ರತಿಷ್ಠಾನ ಉಪ್ಪಿನಂಗಡಿ, ಎಸ್.ಡಿ.ಪಿ. ರೆಮಿಡೀಸ್ ಪುತ್ತೂರು, ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಪುತ್ತೂರು, ದ್ವಾರಕಾ ಸಮೂಹ ಸಂಸ್ಥೆಗಳು ಪುತ್ತೂರು, ಗೌರಿ ಮಾಧವ ನಾಯಕ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಪ್ರಗತಿ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಖ್ಯಾತ ಪ್ರವಚನಕಾರರಾದ ಮುಳಿಯ ಶಂಕರ ಭಟ್ಟ ಇವರು ಸಮ್ಮೇಳನಧ್ಯಕ್ಷತೆ ವಹಿಸಲಿದ್ದು, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಉದ್ಘಾಟನೆ ಮಾಡಲಿದ್ದಾರೆ. ದ್ವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಎ. ಗೋಪಾಲಕೃಷ್ಣ ಭಟ್ಟ ಇವರು ‘ನೆನಪಿನ ಸಂಚಿಕೆ ‘ಗಮಕ ಗಂಗಾಧರ’ ಬಿಡುಗಡೆ ಮಾಡಲಿದ್ದಾರೆ. ಸಂಜೆ 4-00 ಗಂಟೆಗೆ ನವರಸ ಗಮಕ ಪ್ರಸ್ತುತಗೊಳ್ಳಲಿದೆ.
ದಿನಾಂಕ 18 ಅಕ್ಟೋಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಜಿಲ್ಲಾ ಮಟ್ಟದ ಕಾವ್ಯ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಬಹುಮಾನ ವಿಜೇತರಿಂದ ಕಾವ್ಯ ಗಾಯನ, 10-00 ಗಂಟೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ನಡೆಯುವ ಗಮಕ ಸಂವಾದ ಗೋಷ್ಠಿಯಲ್ಲಿ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ, ಪ್ರಾಚಾರ್ಯ ಪ್ರೊ. ಸುಬ್ಬಪ್ಪ ಕೈಕಂಬ ಮತ್ತು ಅಧ್ಯಾಪಕರಾದ ಶ್ರೀಮತಿ ಕವಿತಾ ಅಡೂರು ಇವರುಗಳು ಭಾಗವಹಿಸಲಿದ್ದಾರೆ. 11-00 ಗಂಟೆಗೆ ಗಮಕ ವೈಭವ, 1-00 ಗಂಟೆಗೆ ಸಮ್ಮೇಳನಾಧ್ಯಕ್ಷರ ಮತ್ತು ಇತರರ ರಚನೆಗಳ ಗಾಯನ, 2-00 ಗಂಟೆಗೆ ಪಾವಂಜೆ ಹರಿದಾಸ ಲಕ್ಷ್ಮೀನಾರ್ಣಪ್ಪಯ್ಯ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಂಜೆ ಗಂಟೆ 3-15ಕ್ಕೆ ಸಮಾರೋಪ ಸಮಾರಂಭ ಮುಳಿಯ ಶಂಕರ ಭಟ್ಟ ಇವರು ಅಧ್ಯಕ್ಷತೆ ವಹಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ತಾಳ್ತಜೆ ವಸಂತ ಕುಮಾರ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.