ಮಂಗಳೂರು : ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ ದಿನಾಂಕ 17 ಅಕ್ಟೋಬರ್ 2025ರಂದು ಮುಲ್ಕಿ ಕಾರ್ನಾಡ್ ಇಲ್ಲಿರುವ ಸಿ.ಎಸ್.ಐ. ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು.
ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಎಲಿಜಬೆತ್ ಪುಷ್ಪಲತಾ ಬಂಗೇರ ಕಾರ್ಯಕ್ರಮದ ಉದ್ಘಾಟನೆಗೈದರು. ಕಾರ್ಯಾಧ್ಯಕ್ಷರು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಶ್ರೀ ಉಮೇಶ್ ರಾವ್ ಕುಂಬ್ಳೆ ಪ್ರಾಸ್ತಾವಿಕ ನುಡಿಗಳನಾಡಿ, ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ನಡೆಸಿದರು. ಅಂದಿನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರುವ ಕೊಳ್ಚಪ್ಪೆ ಗೋವಿಂದ ಭಟ್ ಸಾಹಿತ್ಯದ ಬಗೆಗಿನ ಮಾಹಿತಿ ವಿದ್ಯಾರ್ಥಿಗಳಿಗೆ ತಿಳಿಸಿ, ವಿದ್ಯಾರ್ಥಿಗಳ ಗುಂಪು ರಸ ಪ್ರಶ್ನೆ ನಡೆಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು. ಉದ್ಘಾಟಕರು, ಕಾರ್ಯಕ್ರಮದ ನಿರೂಪಕರು ಆದ ಶ್ರೀಮತಿ ಎಲಿಜಬೆತ್ ಪುಷ್ಪಲತಾ ಬಂಗೇರ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ, ಪುಸ್ತಕ ನೀಡಿ ಗೌರವಿಸಿ ಅಭಿನಂದಿಸಲಾಯಿತು. ಶಿಕ್ಷಕಿ ಶ್ರೀಮತಿ ಜಯಶ್ರೀ ದಿನೇಶ್ ಪುನರೂರು ಇವರನ್ನೂ ಸ್ಮರಣಿಕೆ, ಪುಸ್ತಕ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಧನ್ಯವಾದಗೈದರು.