ಮಂಗಳೂರು : ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಗುರು ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯ ಅನಂತಕೃಷ್ಣ ಸಿ.ವಿ. ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 25 ಅಕ್ಟೋಬರ್ 2025ರಂದು ಸಂಜೆ ಗಂಟೆ 5-15ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಶಾಂತಲಾ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾಶ್ರೀ ಗುರು ಉಳ್ಳಾಲ ಮೋಹನ್ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಬೋಳೂರು ಎಸ್.ಡಿ.ಎಂ. ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಜೋಯ್ ಜೀವನ್ ಪೈ, ಡಾ. ಸಾಗರ್ ಟಿ.ಎಸ್. ಮತ್ತು ಡಾ. ಕಿಶೋರ್ ಕುಮಾರ್ ಉಬ್ರಂಗಳ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ವಿದ್ಯಾಶ್ರೀ ರಾಧಾಕೃಷ್ಣ, ಹಾಡುಗಾರಿಕೆಯಲ್ಲಿ ಚೆನ್ನೈಯ ವಿದ್ವಾನ್ ಶ್ರೀಕಾಂತ್ ಗೋಪಾಲ ಕೃಷ್ಣನ್, ಮೃದಂಗದಲ್ಲಿ ಬೆಂಗಳೂರಿನ ವಿದ್ವಾನ್ ವಿನಯ್ ನಾಗರಾಜನ್, ವೀಣೆಯಲ್ಲಿ ಚೆನ್ನೈಯ ವಿದ್ವಾನ್ ಅನಂತನಾರಾಯಣ ಮತ್ತು ಕೊಳಲಿನಲ್ಲಿ ಬೆಂಗಳೂರಿನ ವಿದ್ವಾನ್ ರಘುನಂದನ್ ಇವರುಗಳು ಸಹಕರಿಸಲಿದ್ದಾರೆ.