ಸುರತ್ಕಲ್: ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸುರತ್ಕಲ್ ಗೋವಿಂದದಾಸ ಕಾಲೇಜು ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್.ಜಿ. ಮಾತನಾಡಿ “ಮಕ್ಕಳ ವ್ಯಕ್ತಿತ್ವದ ಸಕಾರಾತ್ಮಕ ಬೆಳವಣಿಗೆಗೆ ಯಕ್ಷಗಾನ ಸಹಕಾರಿ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸುರತ್ಕಲ್ ಬಂಟರ ಸಂಘ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ “ಮಕ್ಕಳಿಗೆ ಕಲೆಯ ಮೇಲೆ ಆಸಕ್ತಿ ಬೆಳೆಯಲು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದರು.
ಉದ್ಯಮಿ ಸತೀಶ್ ಮುಂಚೂರು, ದ.ಕ. ಜಿಲ್ಲಾ ಬಿ.ಜೆ.ಪಿ ವಕ್ತಾರ ರಾಜ್ ಗೋಪಾಲ್ ರೈ, ಹೋಟೆಲ್ ಉದ್ಯಮಿ ಚಂದ್ರಹಾಸ ಶೆಟ್ಟಿ ಕಂಫರ್ಟ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಮಮತ ಪ್ರೇಮ್‌ನಾಥ್ ಹೆಗ್ಡೆ, ಸೀಮಾ ಶೆಟ್ಟಿ ಸುಭಾಷಿತನಗರ, ಸಹನಾ ರಾಜೇಶ್ ರೈ, ಯಕ್ಷ ಗುರು ರಾಕೇಶ್ ರೈ ಅಡ್ಕ, ಸಂಘದ ಮಾಜಿ ಅಧ್ಯಕ್ಷ ಸುಧಾಕರ್ ಎಸ್.ಪೂಂಜ ಅತಿಥಿಗಳಾಗಿದ್ದರು.
ಉಪಾಧ್ಯಕ್ಷ ಪ್ರವೀಣ್ ಪಿ. ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮಧ್ಯ, ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ತಾರಾನಾಥ್ ಶೆಟ್ಟಿ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಹಾಗೂ ಪಿ.ಯು.ಸಿ.ಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ‘ಯಕ್ಷಸಿರಿ’ಯ ವಿದ್ಯಾಥಿಗಳನ್ನು ಅಭಿನಂದಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ್ ಶೆಟ್ಟಿ ಸ್ವಾಗತಿಸಿ, ಡಾ.ಸುಧಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕವಿತಾ ಪುಷ್ಪರಾಜ್ ಶೆಟ್ಟಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಇತರ ಕಲಾವಿದರ ಕೂಡುವಿಕೆಯೊಂದಿಗೆ ‘ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ನಡೆಯಿತು.
Subscribe to Updates
Get the latest creative news from FooBar about art, design and business.
Previous Articleಮಕ್ಕಳ ಮೇಳದ 50ರ ಸಂಭ್ರಮದ ‘ಸುವರ್ಣ ಪರ್ವ’ ಸಮಾರೋಪ ಸಮಾರಂಭ