ಮಾಣಿ : ಯಕ್ಷಗಾನ ಸಮಿತಿ ಮಾಣಿ ಇದರ 42ನೇ ವರ್ಷದ ತಾಳಮದ್ದಲೆ ಕೂಟವನ್ನು ದಿನಾಂಕ 26 ಅಕ್ಟೋಬರ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ಕವಿ ಪಾರ್ತಿಸುಬ್ಬ ವಿರಚಿತ ‘ವಾಲಿ ವಧೆ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆಯ ಹಿಮ್ಮೇಳದಲ್ಲಿ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ರಾಜೇಂದ್ರಕೃಷ್ಣ ಪಂಜಿಗದ್ದೆ ಹಾಗೂ ಮುಮ್ಮೇಳದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್, ವಾಸುದೇವ ರಂಗ ಭಟ್ ಮಧೂರು, ಸಂಕದಗುಂಡಿ ಗಣಪತಿ ಭಟ್ ಮತ್ತು ಹರೀಶ್ ಬಳಂತಿಮೊಗರು ಇವರುಗಳು ಸಹಕರಿಸಲಿದ್ದಾರೆ.

