ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಹಾಗೂ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಜಂಟಿ ಆಶ್ರಯದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯೊಂದಿಗೆ ‘ಕನ್ನಡ ರಾಜ್ಯೋತ್ಸವ 2025’ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ದಿನಾಂಕ 01 ನವೆಂಬರ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಪುತ್ತೂರು ಮುಕ್ರಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಪುತ್ತೂರು ಉಮೇಶ್ ನಾಯಕ್ ಇವರು ವಹಿಸಲಿದ್ದು, ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಇವರು ಉದ್ಘಾಟನೆ ಮಾಡಲಿದ್ದಾರೆ. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವಿಜಯ ಕುಮಾರ್ ಮೊಳೆಯಾಲ್ ಇವರು ಆಶಯ ಭಾಷಣ ಐ.ಎ.ಎಸ್. ತಜ್ಞ ದರ್ಶನ್ ಗರ್ತಿಕೆರೆ ಇವರು ‘ಮೊಳಗಲಿ ಕನ್ನಡದ ಕಹಳೆ’ ಆಲ್ಬಮ್ ಹಾಡು ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮತ್ತು ಕವಿಗೋಷ್ಠಿ ಪ್ರಸ್ತುತಗೊಳ್ಳಲಿದೆ.

