ಕಾರ್ಕಳ : ಕನ್ನಡ ಸಂಘ ಕಾಂತಾವರ ಇದರ ಐವತ್ತರ ಸಂಭ್ರಮ ಮೊದಲ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 01 ನವೆಂಬರ್ 2025ರಂದು ಬೆಳಿಗ್ಗೆ 9-30 ಗಂಟೆಗೆ ಕಾಂತಾವರದ ರಥಬೀದಿಯಲ್ಲಿರುವ ‘ಕನ್ನಡ ಭವನ’ದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ವಹಿಸಲಿದ್ದು, ಸುವರ್ಣ ಸಂಭ್ರಮ ಸಮಿತಿಯ ಗೌರವ ಕಾರ್ಯದರ್ಶಿಯಾದ ಕಮಲಾಕ್ಷ ಕಾಮತ್ ಇವರು ಉದ್ಘಾಟನೆ ಮಾಡಲಿದ್ದಾರೆ. ಉಡುಪಿಯ ಸಂಸ್ಕೃತಿ ವಿಶ್ವಪ್ರತಿಷ್ಠಾನದ ಅಧ್ಯಕ್ಷರಾದ ಯು. ವಿಶ್ವನಾಥ ಶೆಣೈ ಇವರು ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯ ನೂತನ ಹೊತ್ತಗೆಗಳನ್ನು ಹಾಗೂ ಸುವರ್ಣ ಸಂಭ್ರಮ ಸಮಿತಿಯ ಗೌರವ ಕಾರ್ಯಾಧ್ಯಕ್ಷರಾದ ಕೆ. ಶ್ರೀಪತಿ ಭಟ್ ಇವರು ‘ಆನೆ ಕಾಲಿಗೆ ಅಂಕುಶ – ಸಂಯೋಜಿತ ಚಿಕಿತ್ಸೆಯ ಹರಿಕಾರ ಡಾ. ನರಹರಿ ಮತ್ತು ಐಎಡಿ’ ಬಿಡುಗಡಗೊಳಿಸಲಿದ್ದಾರೆ. ಅಪರಾಹ್ನ 3-00 ಗಂಟೆಗೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
 
  
  
 
 
									 
					