ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ಡಾ. ಇಂದಿರಾ ಹೆಗ್ಗೆಡೆ ಇವರು ರಚಿಸಿದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 5 ನವೆಂಬರ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳುಭವನದ ಸಿರಿ ಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ವಹಿಸಲಿದ್ದು, ನಿವೃತ್ತ ಪ್ರಾಂಶುಪಾಲರಾದ ಡಾ. ಆಶಾಲತ ಸುವರ್ಣ ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

