ಉಡುಪಿ : ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಆಶ್ರಯದಲ್ಲಿ 2025ನೆಯ ಸಾಲಿನ ‘ಕನಕ ಜಯಂತಿ’ ಕಾರ್ಯಕ್ರಮವು ದಿನಾಂಕ 08 ನವಂಬರ್ 2025ರ ಶನಿವಾರದಂದು ಬೆಳಿಗ್ಗೆ 9-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜು ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಬೆಳಿಗ್ಗೆ 9-00 ಗಂಟೆಯಿಂದ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಂದ ಕನಕ ಕೀರ್ತನೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಡಾ. ಮಹಾಬಲೇಶ್ವರ ರಾವ್ ಇವರು ವಹಿಸಲಿದ್ದು, ಎಂ.ಜಿ.ಎಂ. ಕಾಲೇಜಿನ ಗಾಂಧಿಯನ್ ಸೆಂಟರ್ ಮುಖ್ಯಸ್ಥರಾದ ವಿನೀತ್ ರಾವ್ ಉಪಸ್ಥಿತರಿರುವರು. ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಆರ್. ನರಸಿಂಹಮೂರ್ತಿ ಇವರಿಂದ ‘ದಾಸ ಪರಂಪರೆಯ ಅನನ್ಯ ಚೇತನ ಕನಕದಾಸರು’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ. ಇದೇ ಸಂದರ್ಭದಲ್ಲಿ ದಿನಾಂಕ 07 ನವೆಂಬರ್ 2025ರಂದು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಕನಕ ಕೀರ್ತನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

