ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಮ್ಮೇಳನ ಸಮಿತಿ ಮಂಗಳೂರು ಇವರ ವತಿಯಿಂದ ಆಯೋಜಿಸುವ ‘ವರ್ಣಯಾನ’ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಮ್ಮೇಳನವು ದಿನಾಂಕ 09 ನವೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲ್ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ.ಫಾ. ಮೆಲ್ವಿನ್ ಪಿಂಟೊ ಎಸ್.ಜೆ. ಇವರು ನಿರ್ವಹಿಸಲಿದ್ದು, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಖಂಡಿಗ ಇವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ‘ಶಿಕ್ಷಣದಲ್ಲಿ ಚಿತ್ರಕಲೆಯ ಮಹತ್ವ ಮತ್ತು ಪ್ರಸ್ತುತ ಸ್ಥಿತಿಗತಿ’ ಎಂಬ ವಿಷಯದ ಬಗ್ಗೆ ಖ್ಯಾತ ಲೇಖಕ ಹಾಗೂ ಚಿಂತಕರಾದ ಅರವಿಂದ ಚೊಕ್ಕಾಡಿ ವಿಷಯ ಮಂಡನೆ ಮಾಡಲಿದ್ದಾರೆ. ಕಾವ್ಯ ಕುಂಚದಲ್ಲಿ ಕಲಾವಿದರಾದ ಮುರಳೀಧರ ಆಚಾರ್ಯ, ಯಶು ಸ್ನೇಹಗಿರಿ, ಲಾಲ್ ಮೋಹನ್ ಅಭಿಷೇಕ್ ತೀರ್ಥಹಳ್ಳಿ ಇವರ ಕಲಾ ಪ್ರದರ್ಶನ ಮತ್ತು 3-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ 11-00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನಡೆಯುವ ಚಿತ್ರಕಲಾ ಸ್ಪರ್ಧೆಯನ್ನು ಆಶ್ರಯ್ ಭಂಡಾರಿ ಮತ್ತು 2-00 ಗಂಟೆಗೆ ಚಿತ್ರಕಲೆ, ಕ್ರಾಫ್ಟ್ ಮತ್ತು ಕ್ಲೇ ಮಾಡಲಿಂಗ್ ಉಚಿತ ಕಾರ್ಯಾಗಾರವನ್ನು ಎಂ. ಪ್ರಶಾಂತ್ ಶೇಟ್ ಇವರು ಉದ್ಘಾಟನೆ ಮಾಡಲಿದ್ದಾರೆ.

