ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ- 2025 ಇದರ 5ನೇ ಕಾರ್ಯಕ್ರಮದ ಅಂಗವಾಗಿ ಸುಳ್ಯ ಪ್ರೆಸ್ ಕ್ಲಬ್ ನ ಸಹಯೋಗದೊಂದಿಗೆ ವಿಶೇಷ ಉಪನ್ಯಾಸ ಮತ್ತು ಪತ್ರಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿಯು ದಿನಾಂಕ 05 ನವೆಂಬರ್ 2025ರಂದು ಸುಳ್ಯ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕ.ಸಾ.ಪ. ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡ (ಕಿರಣ) ನೆರವೇರಿಸಿದರು. ‘ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ’ ಎಂಬ ವಿಷಯದ ಬಗ್ಗೆ ಜಾನಪದ ಸಂಶೋಧಕರು ಮತ್ತು ಶಿಕ್ಷಕರಾದ ಡಾ. ಸುಂದರ್ ಕೇನಾಜೆ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಶ್ರೀಮತಿ ಜಯಮ್ಮ ಬಿ. ಚೆಟ್ಟಿಮಾಡ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಭಾಗವಹಿಸಿ ಮಾತನಾಡಿದರು. ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾದ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಪತ್ರಕರ್ತ ಸಾಹಿತಿಗಳಾದ ಗಂಗಾಧರ ಮಟ್ಟಿ, ಜಯಪ್ರಕಾಶ್ ಕುಕ್ಕೆಟ್ಟಿ, ಯಶ್ವಿತ್ ಕಾಳಂಮನೆ, ಹಸೈನಾರ್ ಜಯನಗರ, ಶಿವಪ್ರಸಾದ್ ಅಲೆಟ್ಟಿ, ತೇಜೇಶ್ವರ ಕುಂದಲ್ಪಾಡಿ, ಜಯಶ್ರೀ ಕೊಯಿಂಗೋಡಿ, ದಯಾನಂದ ಕಲ್ನಾರ್, ಪದ್ಮನಾಭ ಅರಂಬೂರು ಹಾಗೂ ಚಂದ್ರಾವತಿ ಬಡ್ಡಡ್ಕ, ಮುಸ್ತಾಫ ಬೆಳ್ಳಾರೆ ಕವನ ವಾಚನ ಮಾಡಿದರು.
ಕ.ಸಾ.ಪ. ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕ.ಸಾ.ಪ. ಸುಳ್ಯದ ಗೌರವ ಕಾರ್ಯದರ್ಶಿ ಶ್ರೀಮತಿ ಚಂದ್ರಮತಿ ಕೆ., ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಇವರುಗಳು ವೇದಿಕೆಯಲ್ಲಿದ್ದರು. ಕಾರ್ಯಕ್ರಮ ಸಂಯೋಜಕ ಶರೀಫ್ ಜಟ್ಟಿವಳ್ಳಿ ಸ್ವಾಗತಿಸಿ, ಶ್ರೀಮತಿ ಚಂದ್ರಮತಿ ಕೆ. ವಂದಿಸಿ, ಕ.ಸಾ.ಪ. ನಿರ್ದೇಶಕರಾದ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಸಾಹಿತಿ ಲೀಲಾ ದಾಮೋದರ್, ಕೇಶವ ಸಿ.ಎ., ಲತಾಶ್ರೀ ಸುಪ್ರಿತ್ ಮೋಂಟಡ್ಕ ಇತರರು ಉಪಸ್ಥಿತರಿದ್ದರು.
