ಬೆಂಗಳೂರು : ಬೆಂಗಳೂರು ವಿವಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ‘ಕನಕಶ್ರೀ ಪ್ರಶಸ್ತಿ’ಗೆ ಪ್ರಸಕ್ತ ಸಾಲಿನಲ್ಲಿ ವಿಜಯಪುರದ ಹಿರಿಯ ಸಾಹಿತಿ, ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಇವರನ್ನು ಆಯ್ಕೆ ಮಾಡಲಾಗಿದೆ.
‘ಹಾಲುಮತ ಸನಾತನ ಧರ್ಮ’, ‘ಕುರುಬರ ಕುಲಪುತ್ರ ಚಂದ್ರಗುಪ್ತ ಮೌರ್ಯ’, ‘ದಾರ್ಶನಿಕ ಕವಿ ಕನಕದಾಸ’ ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿರುವ ಚಂದ್ರಕಾಂತ್ ಇವರನ್ನು ಡಾ. ಕೆ. ಮರುಳಸಿದ್ದಪ್ಪ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದಿನಾಂಕ 08 ನವೆಂಬರ್ 2025ರಂದು ನಡೆಯುವ ಸಂತ ಶ್ರೇಷ್ಠ ಕನಕದಾಸ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು, ಕನಕದಾಸರ ಪುತ್ಥಳಿ, ಪ್ರಶಸ್ತಿ ಫಲಕ ಹಾಗೂ ಫಲ ತಾಂಬೂಲ ಒಳಗೊಂಡಿದೆ.
