ಉಡುಪಿ : ಡಾ. ವಿರೂಪಾಕ್ಷ ದೇವರಮನೆಯವರು ರಚಿಸಿರುವ ‘ಮಕ್ಕಳು ಮಕ್ಕಳಾಗಿರಲು ಬಿಡಿ’ ಮತ್ತು ‘ಓ ಮನಸೇ ತುಸು ನಿಧಾನಿಸು’ ಎಂಬ ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 14 ನವೆಂಬರ್ 2025ರಂದು ಸಂಜೆ 4-30 ಗಂಟೆಗೆ ಉಡುಪಿ ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ. ಗಿರಿಜಾ ಎ. ಇವರು ವಹಿಸಲಿದ್ದು, ರತ್ನಶೀಲ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ಮನು ಹಂದಾಡಿ, ಬ್ರಹ್ಮಾವರ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಅಭಿಲಾಷಾ ಹಂದೆ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಶಂಕರ್ ಜೂನಿಯರ್ (ತೇಜಸ್ವಿ) ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶೇಷ ಪುಸ್ತಕ ಪ್ರದರ್ಶನ, ವಿಶೇಷ ಚಿತ್ರಕಲಾ ಪ್ರದರ್ಶನ ಮತ್ತು ವಿಶೇಷ ಮ್ಯಾಜಿಕ್ ಪ್ರದರ್ಶನ ನಡೆಯಲಿದೆ.

