ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಕರ್ನಾಟಕ ಸರ್ಕಾರ ಮತ್ತು ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರ ಇವರ ಸಹಯೋಗದೊಂದಿಗೆ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 15 ನವೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 10ನೇ ಆವೃತ್ತಿಯ ವಿದ್ಯಾರ್ಥಿಗಳು ಪ್ರಯೋಗಿಸುವ ತಿಂಗಳ ನಾಟಕ ‘ಪಂಚವಟಿ’ ಯಕ್ಷಗಾನ ಪ್ರಸಂಗ ಗುರು ಬನ್ನಂಜೆ ಸಂಜೀವ ಸುವರ್ಣ ಇವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

