ಹೆಗ್ಗೋಡು: ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2023-24ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆಯ ಬಾಬ್ತು ಭಾಗಶಃ ವಿದ್ಯಾರ್ಥಿವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಬಳಸಿ