ಕಲಬುರಗಿ : ಕರ್ನಾಟಕ ವಿಕಾಸ ರಂಗ ಬೆಂಗಳೂರು ಜಿಲ್ಲಾ ಘಟಕ ಕಲಬುರಗಿ ಇವರ ವತಿಯಿಂದ ಡಾ. ಚಿ.ಸಿ. ನಿಂಗಣ್ಣ ರಚಿಸಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಕೃತಿ ಲೋಕಾರ್ಪಣೆ ಹಾಗೂ ಸಾಧಕರಿಗೆ ‘ಕನ್ನಡ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21 ನವೆಂಬರ್ 2025ರಂದು ಸಂಜೆ 4-30 ಗಂಟೆಗೆ ಕಲಬುರಗಿ ಮುಖ್ಯ ರಸ್ತೆಯಲ್ಲಿರುವ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯಲಿದೆ.
ಕಲಬುರಗಿ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ತಿಪ್ಪಣ್ಣಪ್ಪ ಕಮಕನೂರ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ಕಲಬುರಗಿ ಗ್ರಾಮೀಣ ಮತ ಕ್ಷೇತ್ರದ ಶಾಸಕರಾದ ಸರೋಯಿ ಬಸವರಾಜ ಮತ್ತಿಮೂಡ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ಮುಖಂಡರಾದ ಶಿವಕಾಂತ ಮಹಾಜನ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ಸಾಹಿತಿ ಪ್ರೊ. ಶಿವರಾಜ ಪಾಟೀಲ ಇವರು ಕೃತಿ ಕುರಿತು ಮಾತನಾಡಲಿದ್ದಾರೆ. ಕರ್ನಾಟಕ ವಿಕಾಸ ರಂಗ ಇದರ ಅಧ್ಯಕ್ಷರಾದ ಡಾ. ಚಿ.ಸಿ. ನಿಂಗಣ್ಣ ಇವರ ಗೌರವ ಉಪಸ್ಥಿತಿಯಲ್ಲಿ ನಿತೀನ ವ್ಹಿ. ಗುತ್ತೇದಾರ ಇವರು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

