ಪರ್ಕಳ : ಗುರುವಸಂತಿ ಸಾಂಸ್ಕೃತಿಕ ವೇದಿಕೆ – ಮಣಿಪಾಲ ಇದರ ದಶಮಾನೋತ್ಸವದ ಪ್ರಯುಕ್ತ ನಾಟಕ ರಂಗ ತರಬೇತಿ ಶಿಬಿರವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ಪರ್ಕಳದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9-00 ಗಂಟೆಗೆ ಉದ್ಘಾಟನಾ ಸಮಾರಂಭ ಹಾಗೂ ಸಂಜೆ 5-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಶಿಬಿರವು ಉಚಿತವಾಗಿದ್ದು, 12ರಿಂದ 45ರವರೆಗಿನ ವಯೋಮಿತಿಯವರು ಭಾಗವಹಿಸಬಹುದು.

