ಮಂಗಳೂರು : ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ವೇದಿಕೆ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಜಂಟಿಯಾಗಿ ಆಯೋಜಿಸುವ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 23 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ 2025’ಕ್ಕೆ ಯಕ್ಷಗಾನ ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಆಯ್ಕೆಯಾಗಿದ್ದು, ಪ್ರಶಸ್ತಿಯು ಸನ್ಮಾನ ಪತ್ರ ಮತ್ತು ರೂ.25,000/- ನಗದು ಒಳಗೊಂಡಿದೆ.
ಹಿರಿಯ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿದ್ವಾಂಸ ಡಾ. ಪ್ರಭಾಕರ ಜೋಶಿ ಸಂಸ್ಮರಣೆ ಮಾಡುವರು, ಮುಖ್ಯ ಅತಿಥಿಗಳಾಗಿ ಮಂಗಳೂರು ಬಸ್ ಮಾಲಿಕರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಶೀಲ ಅಡ್ಯಂತಾಯ, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಸಂಜೆ 6-00 ಗಂಟೆಗೆ ‘ಅಂಗದ ಸಂಧಾನ’ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಹಿಮ್ಮೇಳದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ, ಚೆಂಡೆ ಮದ್ದಳೆಯಲ್ಲಿ ಸತ್ಯಜಿತ್ ರಾಯಿ, ಸಮರ್ಥ್ ಉಡುಪ ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಹಿರಿಯ ಅರ್ಥದಾರಿಗಳಾದ ಸರ್ಪಂಗಳ ಈಶ್ವರ ಭಟ್ ಮತ್ತು ಸದಾಶಿವ ಆಳ್ವ ತಲಪಾಡಿ ಭಾಗವಹಿಸುವರು.

