ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು (51) ದಿನಾಂಕ 19 ನವೆಂಬರ್ 2025ರಂದು ಹೃದಯ ಸ್ತಂಭನದಿಂದ ನಿಧನ ಹೊಂದಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರಾದ ಗೌಡರು ಪ್ರತಿಭಾನ್ವಿತ ಯಕ್ಷಗಾನ ಕಲಾವಿದರಾಗಿದ್ದು, ಶಿವರಾಜಪುರ, ಮೇಗರವಳ್ಳಿ, ಮಡಾಮಕ್ಕಿ, ಅಮೃತೇಶ್ವರೀ, ಮಂದಾರ್ತಿ ಮೇಳಗಳಲ್ಲಿ ಸುಮಾರು ಮೂರು ದಶಕಗಳಿಂದ ಕಲಾಸೇವೆ ಮಾಡುತ್ತಾ ಬಂದಿದ್ದರು. ಪೌರಾಣಿಕ ಪುರುಷ ಪಾತ್ರಗಳನ್ನು ಸಮರ್ಥವಾಗಿ ರಂಗದಲ್ಲಿ ಪ್ರಸ್ತುತಗೊಳಿಸುವ ಕಲಾಸಿದ್ಧಿ ಪಡೆದಿದ್ದರು. ಅಂತ್ಯ ಸಂಸ್ಕಾರ ಇಂದು ಶೃಂಗೇರಿ ಸನಿಹದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಜರಗಲಿದೆ.

