ಮಂಡ್ಯ : ಕರ್ನಾಟಕ ಸಂಘ ಮಂಡ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ ಗಂಟೆ 11-00ಕ್ಕೆ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ಆಯೋಜಿಸಲಾಗಿದೆ.
ಮಂಡ್ಯದ ಎಸ್.ಬಿ. ಎಜುಕೇಷನ್ ಟ್ರಸ್ಟ್ ಇವರ ಅಧ್ಯಕ್ಷರಾದ ಡಾ. ಬಿ. ಶಿವಲಿಂಗಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಪ್ರಸಿದ್ಧ ಗಾಯಕರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಿ ರಾಜ್ಯೋತ್ಸವ ಕುರಿತು ಮಾತನಾಡಲಿದ್ದಾರೆ. ಮಂಡ್ಯ ಜಿಲ್ಲಾ ಲಯನ್ಸ್ ಇದರ ಮಾಜಿ ರಾಜ್ಯಪಾಲರಾದ ಶ್ರೀ ಲಯನ್ ಕೆ. ದೇವೇಗೌಡ ಮತ್ತು ಪರಿಸರ ಇಂಜಿನಿಯರಿಂಗ್ ಸಂಘ ಕರ್ನಾಟಕ ಇದರ ಅಧ್ಯಕ್ಷರಾದ ಡಾ. ಕೆ.ಸಿ. ಜಯರಾಮು ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಇದರ ಪ್ರಾಂಶುಪಾಲರಾದ ಪ್ರೊ. ಗುರುರಾಜಪ್ರಭು ಕೆ. ಇವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.

