ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳ ಯಕ್ಷ ರಂಗಾಯಣ ರೆಪರ್ಟರಿ ಕಲಾವಿದರು ಪ್ರಸ್ತುತ ಪಡಿಸುವ ‘ಸೋಮಿಯ ಸೌಭಾಗ್ಯ’ ಗೀತ ನಾಟಕ ಪ್ರದರ್ಶನ ದಿನಾಂಕ 03 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಎಸ್. ಆರ್. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಕೆ. ಶಿವರಾಮ ಕಾರಂತ ಇವರ ರಚನೆಯ ಈ ನಾಟಕವನ್ನು ಗಣೇಶ್ ಮಂದಾರ್ತಿ ಇವರು ನಿರ್ದೇಶನ ಮಾಡಿದ್ದಾರೆ.

