ಪುತ್ತೂರು : ಬೆಂಗಳೂರಿನ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದಲ್ಲಿ ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ-ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಭಾವ ರಾಗ ತಾಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ 4-30 ಗಂಟೆಗೆ ವಿವಿಧ ತಂಡಗಳಿಂದ ‘ಜಾನಪದ ನೃತ್ಯ’ಗಳ ಪ್ರದರ್ಶನ, ಗಂಟೆ 6-15ಕ್ಕೆ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾದ ಯುವ ಕಲಾ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಬಾಲ ಕಲಾವಿದ ಮಾಸ್ಟರ್ ಶಮಂತಕ ಇವರಿಂದ ‘ಭರತನಾಟ್ಯ’ ಮತ್ತು 7-00 ಗಂಟೆಗೆ ಅಂತಾರಾಷ್ಟ್ರೀಯ ಖ್ಯಾತಿಯ ವಯೋಲಿನ್ ಬಾಲ ಕಲಾವಿದೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ವಯೋಲಿನ್ ವೈಭವ’ ಹಾಗೂ ನಡೆಯಲಿದೆ.

