ಅರಗ : ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು ತೀರ್ಥಹಳ್ಳಿ ಹಾಗೂ ಸರ್ಕಾರಿ ಪ್ರೌಢ ಶಾಲೆ ಅರಗ ಇವರ ಸಹಯೋಗದಲ್ಲಿ ತೀರ್ಥಹಳ್ಳಿ ತಾಲೂಕು ಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 23 ಡಿಸೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಅರಗ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ಚಿಟ್ಟೆಬೈಲು ಪ್ರಜ್ಞಾ ಭಾರತಿ ಪ್ರೌಢ ಶಾಲೆಯ ಸಾದ್ವಿ ಎಸ್. ಪ್ರಭು ಇವರು ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಅರಗ ಸರ್ಕಾರಿ ಪ್ರೌಢ ಶಾಲೆಯ ಜನ್ಯ ಡಿ.ಎಂ. ಇವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

