ಉಡುಪಿ : ವಾತ್ಸಲ್ಯ ಕ್ಲಿನಿಕ್ ವಿಂಶತಿ ಸಂಭ್ರಮದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಆಯೋಜನೆಯಲ್ಲಿ ಪ್ರಸಿದ್ಧ ಸ್ತ್ರೀ ಆರೋಗ್ಯ ತಜ್ಞೆ ಡಾ. ರಾಜಲಕ್ಷ್ಮಿ ಇವರ ‘ವಾತ್ಸಲ್ಯದ ಒಸಗೆ’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 26 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್.ಪಿ. ಇವರು ಸಭಾಧ್ಯಕ್ಷತೆ ವಹಿಸಲಿದ್ದು, ಡಾ. ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ವಿ.ಪಿ. ಭಂಡಾರಿ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಸ್ತ್ರೀ ಆರೋಗ್ಯ ತಜ್ಞೆ ಡಾ. ವೀಣಾ ಭಟ್ ಇವರು ಪುಸ್ತಕ ಪರಿಚಯ ಮಾಡಲಿದ್ದು, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಬಿ. ಮಹಾಲಕ್ಷ್ಮಿ ಆಶಯ ನುಡಿಗಳನ್ನಾಡಲಿದ್ದಾರೆ. ಡಾ. ಸ್ನೇಹಾ ಆಚಾರ್ಯ ಇವರಿಂದ ‘ನೃತ್ಯ ಸಿಂಚನ’ ಭರತನಾಟ್ಯ ಪ್ರಸ್ತುತಗೊಳ್ಳಲಿದೆ.

