ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ, ಕೊಯ್ಯೂರು ಸರಕಾರಿ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 28 ಡಿಸೆಂಬರ್ 2025ರಂದು ಕೊಯ್ಯೂರಿನ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿರುವುದು.
ಬೆಳಗ್ಗೆ 8-30 ಗಂಟೆಗೆ ಕನ್ನಡ ಭುವನೇಶ್ವರಿಯ ಮೆರವಣಿಗೆ, 9-30ಕ್ಕೆ ಧ್ವಜಾರೋಹಣ, 9-45 ಗಂಟೆಗೆ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಬಿ. ಭುಜಬಲಿ ಧರ್ಮಸ್ಥಳ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರು ಉದ್ಘಾಟನೆ ಮಾಡಲಿದ್ದಾರೆ. ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ದಿಕ್ಸೂಚಿ ಭಾಷಣ ಮಾಡಲಿದ್ದು, ಕೆ. ಹರೀಶ್ ಕುಮಾರ್ ಇವರು ಕೃತಿ ಬಿಡುಗಡೆ ಮತ್ತು ಶಾಸಕರಾದ ಹರೀಶ್ ಪೂಂಜ ಇವರು ‘ಚಾರುಮುಡಿ’ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಹಚ್ಚೇವು ಕನ್ನಡದ ದೀಪ’ ನೃತ್ಯ ಪ್ರಸ್ತುತಗೊಳ್ಳಲಿದೆ. ಮಧ್ಯಾಹ್ನ 12-00 ಗಂಟೆಗೆ ಪತ್ರಕರ್ತ ಹಾಗೂ ಲೇಖಕರಾದ ಲಕ್ಷ್ಮೀ ಮಚ್ಚಿನ ಇವರ ಅಧ್ಯಕ್ಷತೆಯಲ್ಲಿ ಕಥಾ ಗೋಷ್ಠಿ, ಕುಮಾರಿ ದೀಕ್ಷಿತಾ ಬೆಳ್ತಂಗಡಿ ಇವರಿಂದ ಭಾವಗೀತೆ, ಅದಿತಿ ಮೂಗೆರೋಡಿ ಇವರಿಂದ ನೃತ್ಯ ಪ್ರದರ್ಶನಗೊಳ್ಳಲಿದೆ. 1-00 ಗಂಟೆಗೆ ಕವಿ ಶಂಕರ ಎನ್. ತಾಮನ್ ಕರ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಕೊಯ್ಯೂರು ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಅಪರಾಹ್ನ 2-00 ಗಂಟೆಗೆ ಚಾವಡಿ ಚಿಂತನೆಯಲ್ಲಿ ‘ಶಿಕ್ಷಣ ಸಾಹಿತ್ಯ ಸಂಸ್ಕೃತಿ’ ಎಂಬ ವಿಷಯದ ಬಗ್ಗೆ ವಿಷಯ ಮಂಡನೆ ನಡೆಯಲಿದೆ. ಸಂಜೆ 3-30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕ.ಸಾ.ಪ. ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರು ವಹಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಸಂಜೆ ಗಂಟೆ 4-45ಕ್ಕೆ ವಿದುಷಿ ಸುಕನ್ಯಾ ವಿ. ಕಾಮತ್ ಇವರಿಂದ ಭರತನಾಟ್ಯ ಪ್ರದರ್ಶನ ಹಾಗೂ ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಸಿ. ಕಾಲೇಜಿನ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ವೈವಿಧ್ಯ ಪಸ್ತುತಗೊಳ್ಳಲಿದೆ. ಸಂಜೆ 6-00 ಗಂಟೆಗೆ ದಿನೇಶ್ ಕೊಡಪದವು ಇವರ ನೇತೃತ್ವದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಕವಿರತ್ನ ಕಾಳಿದಾಸ’ ಯಕ್ಷಗಾನ ಬಯಲಾಟ ನಡೆಯಲಿದೆ.

