ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಇವರ ಸಹಯೋಗದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ದಿನಾಂಕ 30 ಡಿಸೆಂಬರ್ 2025ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವನಿತಾ ದೇವಾಡಿಗ ಇವರು ವಹಿಸಿದ್ದು, ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳ ಶೆಟ್ಟಿ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕಿ ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿ, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಯಶೋಧರವರು ವಂದಿಸಿದರು.
