ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಂಗಾಯಣ ಕಲಬುರಗಿ ಇವರ ಸಹಯೋಗದೊಂದಿಗೆ ‘ಕಾಲಚಕ್ರ’ ನಾಟಕ ಪ್ರದರ್ಶನವನ್ನು ದಿನಾಂಕ 02 ಜನವರಿ 202ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ರಂಗಸಮಾಜ ಸದಸ್ಯರಾದ ಶಶಿಧರ್ ಭಾರಿಘಾಟ್ ಮತ್ತು ಡಾ. ಕೆ. ರಾಮಕೃಷ್ಣಯ್ಯ ಇವರು ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿಯವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹುಲಗಪ್ಪ ಕಟ್ಟಿಮನಿ ಇವರ ನಿರ್ದೇಶನದಲ್ಲಿ ರಂಗಾಯಣ ಕಲಬುರಗಿ ತಂಡದವರು ನಾಟಕ ಪ್ರದರ್ಶನ ನೀಡಲಿದ್ದಾರೆ.

