ಧಾರವಾಡ : ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಧಾರವಾಡ ಮತ್ತು ‘ಭಾರತೀಯ ಸಾಹಿತ್ಯ ನಿರ್ಮಾಪಕರು ಮಾಲಿಕೆ’ ಕೇಂದ್ರ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ‘ಗಿರಡ್ಡಿ ಗೋವಿಂದರಾಜ’ ಇಂಗ್ಲೀಷ್ ಆವೃತ್ತಿಯ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 04 ಜನವರಿ 2026ರಂದು ಸಂಜೆ 5-30 ಗಂಟೆಗೆ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಧಾರವಾಡದ ಖ್ಯಾತ ಸಾಹಿತಿ ಡಾ. ವೀಣಾ ಶಾಂತೇಶ್ವರ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ನವದೆಹಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಮಂಡಳಿ ಸದಸ್ಯರಾದ ಚೆನ್ನಪ್ಪ ಅಂಗಡಿ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಇದರ ಅಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಇವರು ಅಧ್ಯಕ್ಷತೆ ವಹಿಸಲಿದ್ದು, ಮಾನ್ಯ ಕುಲಪತಿಗಳಾದ ಡಾ. ಶಿವಾನಂದ ಕೆಳಗಿನಮನಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

