ಹಾಸನ : ಪ್ರತಿಮಾ ಟ್ರಸ್ಟ್ (ರಿ.) ಚನ್ನರಾಯಪಟ್ಟಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಉಮೇಶ್ ತೆಂಕನಹಳ್ಳಿಯವರ ರಚನೆ ಮತ್ತು ನಿರ್ದೇಶನದಲ್ಲಿ ‘ನಮಗೂ ಬದುಕು ಕೊಡಿ’ ಪರಿಸರ ಸ್ನೇಹಿ ನಾಟಕ ಪ್ರದರ್ಶನವನ್ನು ದಿನಾಂಕ 06 ಜನವರಿ 2026ರಂದು ಬೆಳಿಗ್ಗೆ 10-00 ಗಂಟೆಗೆ ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಹಾಸನ ಶ್ರೀ ತಣ್ಣೀರುಹಳ್ಳ ಮಠದ ಮಠಾಧೀಶರಾದ ಶ್ರೀ ವಿಜಯಕುಮಾರಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಸನ ಜಿಲ್ಲಾಧಿಕಾರಿ ಶ್ರೀಮತಿ ಕೆ.ಎಸ್. ಲತಾ ಕುಮಾರಿ ಇವರು ಉದ್ಘಾಟನೆ ಮಾಡಲಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಂದ ಈ ನಾಟಕ ಪ್ರಸ್ತುತಗೊಳ್ಳಲಿದೆ.

