ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಸಾರಥ್ಯದಲ್ಲಿ ಹವ್ಯಕ ಸಭಾ ಮಂಗಳೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ಸಹಕಾರದೊಂದಿಗೆ ‘ವಿಚಾರಗೋಷ್ಠಿ’ಯನ್ನು ದಿನಾಂಕ 25 ಜನವರಿ 2026ರಂದು ಸಂಜೆ 6-00 ಗಂಟೆಗೆ ನಂತೂರು ಶ್ರೀ ಭಾರತಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
‘ಕೌಟುಂಬಿಕ ಮತ್ತು ಸಾಮಾಜಿಕ ಮೌಲ್ಯಗಳ ಅನಿವಾರ್ಯತೆ’ ಎಂಬ ವಿಷಯಯ ಬಗ್ಗೆ ಮಾಯಾಮೃಗ ಖ್ಯಾತಿಯ ಸೇತುರಾಮ್ ಇವರು ವಿಷಯ ಮಂಡನೆ ಮಾಡಲಿದ್ದಾರೆ. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಮತ್ತು ಹವ್ಯಕ ಸಭಾದ ಅಧ್ಯಕ್ಷರಾದ ಶ್ರೀಮತಿ ಗೀತಾದೇವಿ ಚೂಂತಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಮಂಜುನಾಥ ರೇವಣಕರ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

