ಬೀದರ್ : ನಾಟ್ಯಶ್ರೀ ನೃತ್ಯಾಲಯದಿಂದ ಕೊಡಲಾಗುವ 2026ನೇ ಸಾಲಿನ ‘ನಾಟ್ಯಶ್ರೀ ಪ್ರಶಸ್ತಿ’ಗೆ ನೃತ್ಯ ಕಲಾವಿದೆ ಮಂಗಳೂರಿನ ಸನಾತನ ನೃತ್ಯಾಲಯದ ಮುಖ್ಯಸ್ಥೆ ಶಾರದಾಮಣಿ ಶೇಖರ್ ಇವರನ್ನು ಆಯ್ಕೆ ಮಾಡಲಾಗಿದೆ.
ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ನೇತೃತ್ವದಲ್ಲಿ ಸಭೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಪ್ರಶಸ್ತಿಯು ರೂ.20,000/- ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ದಿನಾಂಕ 22 ಫೆಬ್ರವರಿ 2026ರಂದು ಬೀದರ್ ನ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಸತ್ಯಮೂರ್ತಿ ತಿಳಿಸಿದ್ದಾರೆ.
