ಮಂಗಳೂರು : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಇದರ ವತಿಯಿಂದ ‘ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026’ ಕಾರ್ಯಕ್ರಮವನ್ನು ದಿನಾಂಕ 14 ಫೆಬ್ರವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಚಾರ ಸಂಕಿರಣವನ್ನು ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ ಶಾಸ್ತ್ರೀಯ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ನಿಕಟಪೂರ್ವ ಯೋಜನಾ ನಿರ್ದೇಶಕ ಪ್ರೊ. ಬೋಳಾರ ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದು, ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಶುಭ ಧನಂಜಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ. ಸಹಾಯಕ ನಿರ್ದೇಶಕ ರಾಜೇಶ ಜಿ., ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿಸಲಿದ್ದಾರೆ. ವಿಚಾರ ಸಂಕಿರಣ ಗೋಷ್ಠಿಯಲ್ಲಿ ಭಾಗವಹಿಸುವ ಸಂಶೋಧಕರು ತಮ್ಮ ಪಿಎಚ್‌ಡಿ ಪದವಿಯ ಸಂಶೋಧನೆಯ ವಿಷಯವನ್ನು ಮಂಡಿಸಲಿದ್ದಾರೆ. ಕರ್ನಾಟಕ ಸಂಗೀತ ಗೋಷ್ಠಿ, ಭರತನಾಟ್ಯ ಗೋಷ್ಠಿ, ಹಿಂದೂಸ್ತಾನಿ ಸಂಗೀತ ಗೋಷ್ಠಿಯಲ್ಲಿ ಸುಮಾರು 15 ಹಿರಿಯ ಮತ್ತು ಕಿರಿಯ ಸಂಶೋಧಕರು ಗೋಷ್ಠಿಗಳಲ್ಲಿ ತಮ್ಮ ವಿಷಯವನ್ನು ಪ್ರಾಯೋಗಿಕವಾಗಿ ಮಂಡಿಸುತ್ತಾರೆ. ಮಂಗಳೂರಿನ ಕಲಾವಿದರಿಂದ ಭರತನಾಟ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

