ಮಂಜೇಶ್ವರ : ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಸಹಯೋಗದೊಂದಿಗೆ ‘ಕಾಸರಗೋಡಿನಲ್ಲಿ ಕನ್ನಡ ಅಸ್ಮಿತೆ ಯುವಶಕ್ತಿ ಮತ್ತು ಭವಿಷ್ಯ’ ವಿಚಾರ ಸಂಕಿರಣವನ್ನು ದಿನಾಂಕ 26 ಫೆಬ್ರವರಿ 2026ರಂದು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಪೂರ್ವಾಹ್ನ 10-00 ಗಂಟೆಗೆ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ. ರಮಾನಂದ ಬನಾರಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ‘ಕನ್ನಡಿಯಲ್ಲಿ ಕನ್ನಡಿಗ ಸಂಚಿಕೆ -6’ ಕೃತಿಯನ್ನು ನಿವೃತ್ತ ಪ್ರಾಧ್ಯಾಪಕರಾದ ಡಾ. ಪ್ರಮೀಳಾ ಮಾಧವ್ ಇವರು ಬಿಡುಗಡೆ ಮಾಡಲಿದ್ದಾರೆ. 11-30 ಗಂಟೆಗೆ ‘ಕಾಸರಗೋಡಿನಲ್ಲಿ ಕನ್ನಡದ ಇತಿಹಾಸ ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿ, ಮಧ್ಯಾಹ್ನ 1-30 ಗಂಟೆಗೆ ಕನ್ನಡ ಭಾವಲಹರಿ, 2-00 ಗಂಟೆಗೆ ‘ಸಾಂಸ್ಕೃತಿಕ ವಲಯ ಕನ್ನಡದ ಅಸ್ಮಿತೆ’ ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಜೆ 3-30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷರಾದ ಪ್ರೊ. ಪಿ.ಎನ್. ಮೂಡಿತ್ತಾಯ ಇವರು ವಹಿಸಲಿದ್ದು, ಖ್ಯಾತ ವಿಮರ್ಶಕರಾದ ಡಾ. ಎಸ್.ಆರ್. ವಿಜಯಶಂಕರ್ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.

