ಉಡುಪಿ : ರಂಗಭೂಮಿ (ರಿ.) ಉಡುಪಿ ಇದರ ವತಿಯಿಂದ ‘ರಂಗಭೂಮಿ ರಂಗೋತ್ಸವ’ವನ್ನು ದಿನಾಂಕ 04ರಿಂದ 08 ಮಾರ್ಚ್ 2026ರವರೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ. ಮೂರು ದಿನಗಳ ಈ ಸಮಾರಂಭದಲ್ಲಿ ಹಿರಿಯ ರಂಗಕರ್ಮಿ, ನಾಟಕಕಾರ ಚಿಂತಕ ದೇಸಿ ಚಿಂತನೆಗಳ ರಾಯಭಾರಿ ಶ್ರೀ ಪ್ರಸನ್ನ ಇವರಿಗೆ ‘ರಂಗಭೂಮಿ ಪ್ರಶಸ್ತಿ 2026’ ಪ್ರದಾನ, 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ, ನಾಟಕ ಪ್ರದರ್ಶನ ಮತ್ತು ಬಹುರಾಜ್ಯ ಜಾನಪದ ಉತ್ಸವ ನಡೆಯಲಿದೆ.
ದಿನಾಂಕ 04 ಮಾರ್ಚ್ 2026ರಂದು ಸಂಜೆ 6-00 ಗಂಟೆಗೆ ‘ರಂಗಭೂಮಿ ರಂಗೋತ್ಸವ’ದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ‘ರಂಗಭೂಮಿ ಪ್ರಶಸ್ತಿ 2026’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕೇರಳದ ಲಿಟ್ಲ್ ಅರ್ಥ್ ಸ್ಕೂಲ್ ಆಫ್ ಥಿಯೇಟರ್ ಕಲಾವಿದರಿಂದ ‘ಕುಹೂ’ ನಾಟಕ ಪ್ರದರ್ಶನಗೊಳ್ಳಲಿದೆ.
ದಿನಾಂಕ 05 ಮಾರ್ಚ್ 2026ರಂದು ಸಂಜೆ 6-00 ಗಂಟೆಗೆ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ನಡೆಯಲಿದ್ದು, ರಂಗಭೂಮಿಯ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪ್ರಥಮ ಬಹುಮಾನ ಪಡೆದ ‘ಈದಿ’ ನಾಟಕ ವಿದ್ದು ಉಚ್ಚಿಲ್ ಇವರ ನಿರ್ದೇಶನದಲ್ಲಿ ಉಡುಪಿ ಕೊಡವೂರು ಸುಮನಸಾ ತಂಡದಿಂದ ಪ್ರದರ್ಶನಗೊಳ್ಳಲಿದೆ.
ದಿನಾಂಕ 06 ಮಾರ್ಚ್ 2026ರಂದು ಸಂಜೆ 5-30 ಗಂಟೆಗೆ ರಂಗಭೂಮಿ (ರಿ.) ಉಡುಪಿ, ತಾಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ, ಕರ್ನಾಟಕ ಜಾನಪದ ಪರಿಷತ್ (ರಿ.) ಉಡುಪಿ ಜಿಲ್ಲಾ ಘಟಕ ಮತ್ತು ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರ ನಾಗಪುರ ಇವರ ಜಂಟಿ ಸಹಯೋಗದಲ್ಲಿ ‘ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವ’ ನಡೆಯಲಿದ್ದು, ಉಡುಪಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸ್ವರೂಪ ಕೆ.ಟಿ. ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ನಾಗಪುರದ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರದ ವತಿಯಿಂದ ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಛತ್ತೀಸಘರ್ ರಾಜ್ಯಗಳ ಜಾನಪದ ಕಲಾ ವೈವಿಧ್ಯ ಪ್ರಸ್ತುತಗೊಳ್ಳಲಿದೆ.
ದಿನಾಂಕ 07 ಮಾರ್ಚ್ 2026ರಂದು ಸಂಜೆ 6-00 ಗಂಟೆಗೆ ನಾಗಪುರದ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರದ ವತಿಯಿಂದ ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಛತ್ತೀಸಘರ್ ರಾಜ್ಯಗಳ ಜಾನಪದ ಕಲಾ ವೈವಿಧ್ಯ ಪ್ರಸ್ತುತಗೊಳ್ಳಲಿದೆ.
ದಿನಾಂಕ 08 ಮಾರ್ಚ್ 2026ರಂದು ಸಂಜೆ 5-30 ಗಂಟೆಗೆ ‘ಜಾನಪದ ಪ್ರಶಸ್ತಿ’ ಪ್ರದಾನ ಹಾಗೂ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ನಾಗಪುರದ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರದ ವತಿಯಿಂದ ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಛತ್ತೀಸಘರ್ ರಾಜ್ಯಗಳ ಜಾನಪದ ಕಲಾ ವೈವಿಧ್ಯ ಪ್ರಸ್ತುತಗೊಳ್ಳಲಿದೆ.

